ಕೂಡ್ಲಿಗಿ ಕ್ಷೇತ್ರದ ಶಾಸಕ ಎನ್.ಟಿ ಶ್ರೀನಿವಾಸ್ ಅವರು ತಾಲೂಕಿನ ಸೂಲದಹಳ್ಳಿಯಲ್ಲಿ (ಅ.8) ನಾಳೆ ಮನೆ-ಮನೆಗೂ ಶಾಸಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳುವ ಮೂಲಕ ಕಾರ್ಯಕ್ರಮ ಆರಂಭಗೊಳ್ಳಲಿದೆ. ಗ್ರಾಮ ಪಂಚಾಯ್ತಿ ಆವರಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ಮೂಲಕ ಸಮಸ್ಯೆಗಳನ್ನು ಆಲಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸೇರಿದಂತೆ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಭಾಗಿಯಾಗಲ್ಲಿದ್ದು, ಸ್ಥಳದಲ್ಲೇ ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಶಾಸಕರ ಕಚೇರಿ ಪ್ರಕಟಣೆ ಮೂಲಕ ತಿಳಿಸಿದೆ.

