ಮೃತರನ್ನು ತಾಯಿ ವಿಜಯಲಕ್ಷ್ಮಿ ಮತ್ತು ಆಕೆಯ ಮಕ್ಕಳಾದ ಒಂದು ವರ್ಷದ ಭುವನ್ ಮತ್ತು ನಾಲ್ಕು ವರ್ಷದ ಬೃಂದಾ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ವಿಜಯಲಕ್ಷ್ಮಿಯ ತಂಗಿ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಮೂವರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಮೂಲತಃ ರಾಯಚೂರಿನ ಮಸ್ಕಿ ನಿವಾಸಿಗಳಾದ ರಮೇಶ್ ಮತ್ತು ವಿಜಯಲಕ್ಷ್ಮಿ ಅವರಿಗೆ ಮದುವೆಯಾಗಿ ಐದು ವರ್ಷಗಳಾಗಿತ್ತು. ರಮೇಶ್ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹದಿಂದಾಗಿ ಈ ಆತ್ಮಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವಿಜಯಲಕ್ಷ್ಮಿಯ ಸಂಬಂಧಿಕರು ಆಕೆಯ ಆತ್ಮಹತ್ಯೆಗೆ ಪತಿ ರಮೇಶ್ ಅವರೇ ಕಾರಣ ಎಂದು ಆರೋಪಿಸಿದ್ದಾರೆ. ರಮೇಶ್ ಮತ್ತೊಂದು ಮದುವೆಯಾಗಿದ್ದು, ವಿಜಯಲಕ್ಷ್ಮಿಗೆ ವಿಚ್ಛೇದನ ನೀಡುವಂತೆ ಒತ್ತಡ ಹೇರುತ್ತಿದ್ದರು, ಇದರಿಂದಾಗಿ ಕುಟುಂಬದಲ್ಲಿ ಪದೇ ಪದೇ ಜಗಳಗಳು ನಡೆಯುತ್ತಿದ್ದವು. ಪತಿಯ ಹಿಂಸೆಯಿಂದ ಬೇಸತ್ತು ವಿಜಯಲಕ್ಷ್ಮಿ ತನ್ನ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಬಂಧಿಕರು ದೂರಿದ್ದಾರೆ.
ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

