ಬೆಂಗಳೂರು: ಹವಾಮಾನ ಇಲಾಖೆ (IMD)ಯು ಇಂದಿನಿಂದ 4 ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಇದರ ಪರಿಣಾಮವಾಗಿ, ಅಕ್ಟೋಬರ್ 25 ರವರೆಗೆ ರಾಜ್ಯದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು, ಉತ್ತರದ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆಯ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

