ವಿಜಯನಗರ: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮುಖ್ಯಮಂತ್ರಿ ಬದಲಾವಣೆ ಕುರಿತು ಮಾಜಿ ಸಚಿವ ಶ್ರೀರಾಮುಲು ಅವರು ಮಹತ್ವದ ಭವಿಷ್ಯ ನುಡಿದಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆಗೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿಯೊಬ್ಬರು ಆಗಮಿಸಲಿದ್ದಾರೆ ಎಂದು ಅವರು ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಹೇಳಿಕೆ ನೀಡಿದ್ದಾರೆ.
d09bf4e2-f919-4507-b1f5-2aa6f45c47ecಬೆಳಗಾವಿ ಅಧಿವೇಶನದ ಹೊತ್ತಿಗೆ ರಾಜ್ಯಕ್ಕೆ ಹೊಸ ಮುಖ್ಯ ಮಂತ್ರಿ ಬರಲಿದ್ದಾರೆ. ನವೆಂಬರ್ ಕ್ರಾಂತಿಯಲ್ಲಿ ಡಿ.ಕೆ. ಶಿವಕುಮಾರ್ ಅವರಂತೂ ಮುಖ್ಯ ಮಂತ್ರಿಯಾಗುವುದಿಲ್ಲ. 2028ರ ತನಕ ಡಿಕೆಶಿ ಮುಖ್ಯ ಮಂತ್ರಿಯಾಗುವುದಿಲ್ಲ, ಡಿ.ಕೆ. ಶಿವಕುಮಾರ್ ಅವರು ಸದ್ಯ ಕೆಪಿಸಿಸಿ ಅಧ್ಯಕ್ಷ ಸ್ಥಾನದೊಂದಿಗೆ ಉಪ ಮುಖ್ಯಮಂತ್ರಿಯೂ ಆಗಿದ್ದು, ನಾಲ್ಕೈದು ಖಾತೆಗಳೊಂದಿಗೆ ಬೆಂಗಳೂರನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಅವರಿಗೆ ಬಹಳ ಜವಾಬ್ದಾರಿಗಳಿದ್ದು, ಅವುಗಳನ್ನೇ ಮುಂದುವರಿಸಿಕೊಂಡು ಹೋಗಲಿದ್ದಾರೆ ಎಂದರು.
ಮೂರನೇ ವ್ಯಕ್ತಿ ಮುಖ್ಯ ಮಂತ್ರಿಯಾಗಲಿದ್ದು, ಯಾರು ಎಂಬ ಪ್ರಶ್ನೆ ಇದೆ. ಯಾರೇ ಮುಖ್ಯಮಂತ್ರಿಯಾದರೂ, ತಮ್ಮ ಸಮುದಾಯಕ್ಕೆ ಬೆಂಬಲ ನೀಡುತ್ತೀರಾ ಎಂಬ ಪ್ರಶ್ನೆಗೆ ಶ್ರೀರಾಮುಲು ಅವರು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಪ್ರಸ್ತಾಪಿಸಿ ಮಾತನಾಡಿದರು. ಸತೀಶ್ ಜಾರಕಿಹೊಳಿ ಅವರು ಹಿಂದಿನಿಂದಲೂ ಅಹಿಂದ ನಾಯಕರಾಗಿದ್ದಾರೆ. ಸತೀಶ್ ಅವರಿಗೆ ಅವಕಾಶ ಮಾಡಿಕೊಡುವ ಬಗ್ಗೆ ಸ್ವತಃ ಮುಖ್ಯ ಮಂತ್ರಿ ಅವರ ಪುತ್ರ ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಮುಖ್ಯ ಮಂತ್ರಿಯಾದರೆ ನಾವು ಕೂಡ ಸಂತೋಷ ಪಡುತ್ತೇವೆ. ಏಕೆಂದರೆ ಅವರು ನಮ್ಮ ಉತ್ತರ ಕರ್ನಾಟಕದವರಾಗಿದ್ದು, ಅವರಿಂದ ಇಲ್ಲಿಗೆ ಅನುಕೂಲವಾಗಲಿದೆ ಎಂದರು.
ಸರ್ಕಾರ ಬಿದ್ದರೆ ಮಧ್ಯಾಂತರ ಚುನಾವಣೆಗೂ ಸಿದ್ಧ
ರಾಜ್ಯ ಸರ್ಕಾರ ಪತನವಾಗುವ ಸಾಧ್ಯತೆಯ ಬಗ್ಗೆ ಮಾತನಾಡಿದ ಶ್ರೀರಾಮುಲು ಅವರು, “ನವೆಂಬರ್ ಕ್ರಾಂತಿಯಿಂದ ಸರ್ಕಾರ ಬಿದ್ದರೆ ಮಧ್ಯಾಂತರ ಚುನಾವಣೆಗೆ ನಾವು ಸಿದ್ಧವಾಗಿದ್ದೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ಚರ್ಚೆಗಳನ್ನು ಹುಟ್ಟುಹಾಕಿದ್ದು, ಬೆಳಗಾವಿ ಅಧಿವೇಶನದ ಮೇಲೆ ಎಲ್ಲರ ಗಮನ ನೆಟ್ಟಿದೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
ಅಜಯ್ 8123302594, ದಯಾನಂದ್ ಸಜ್ಜನ್ 9886972975

