ರಾಜ್ಯದ ವಿವಿಧ ಭಾಗಗಳಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಕಬ್ಬಿಗೆ ಪ್ರತಿ ಟನ್ಗೆ ₹3,500 ದರ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಬಳಿ ರೈತರ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಸೈದಾಪುರ ಸಕ್ಕರೆ ಕಾರ್ಖಾನೆ ಆವರಣದ ಬಳಿ ರೊಚ್ಚಿಗೆದ್ದ ರೈತರು ಕಬ್ಬು ತುಂಬಿದ 50ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿದ್ದಾರೆ.
ಇದರಿಂದ ಸಾವಿರಾರು ಟನ್ ಕಬ್ಬು ಸುಟ್ಟು ಭಸ್ಮವಾಗಿದ್ದು, ರೈತರು ಕಣ್ಣೀರು ಹಾಕಿದ್ದಾರೆ. ಪ್ರಾರಂಭದಲ್ಲಿ ನಿಪ್ಪಾಣಿ-ಮಹಾಲಿಂಗಪುರ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ರೈತರು ಕಾರ್ಖಾನೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಈ ಘಟನೆ ನಡೆದಿದೆ.
ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ನವೆಂಬರ್ 7ರಂದು ನಡೆದ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆಸಿದ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಈ ವೇಳೆ ಡಿವೈಎಸ್ಪಿ ಸೇರಿ 12 ಪೊಲೀಸರು ಗಾಯಗೊಂಡಿದ್ದರು. ಆರೋಪಿಗಳ ವಿರುದ್ಧ ದೊಂಬಿ, ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲಾಗಿದೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
ಅಜಯ್ 8123302594, ದಯಾನಂದ್ ಸಜ್ಜನ್ 9886972975

