ಕೂಡ್ಲಿಗಿ ; ಬಯಲುಸೀಮೆಯ ಶಿಕ್ಷಣಕಾಶಿ ಎಂದೇ ಪ್ರಸಿದಿಯಾದ ತಾಲೂಕಿನ ಕಾನಮಡಗು ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ಭಾನುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ಸಂಭ್ರಮದಿಂದ ನೆರವೇರಿತು.
ಶರಣಬಸವೇಶ್ವರರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ಸಕಲ ಪೂಜಾವಿಧಿ ವಿಧಾನಗಳೊಂದಿಗೆ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥ ಮುಂದೆ ಸಾಗುತ್ತಿದಂತೆ ಭಕ್ತರು ಜಯಘೋಷ ಹಾಕಿ, ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು.
ಧರ್ಮಾಧಿಕಾರಿ ಐಮಡಿ ಶರಣಾರ್ಯರು, ಚನ್ನಗಿರಿಯ ಕೇದಾರಲಿಂಗ ಶಿವಾಚಾರ್ಯ ಸ್ವಾಮೀಜಿ, ಕೂಡ್ಲಿಗಿ ಹಿರೇಮಠದ ಪ್ರಶಾಂತ ಸಾಗರ ಸ್ವಾಮೀಜಿ ನೇತೃತ್ವದಲ್ಲಿ ರಥಕ್ಕೆ ಪೂಜೆ ಸಲ್ಲಿಸಲಾಯಿತು.
ರಥದ ಮುಕ್ತಿಪಠವನ್ನು ₹ 1,01101 ಲಕ್ಷಕ್ಕೆ ಮೆಟ್ರಿಕುರ್ಕಿ ತಿಪ್ಪೇಸ್ವಾಮಿ
ಹರಾಜಿನಲ್ಲಿ ಪಡೆದುಕೊಂಡರು.
ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ಕಾರ್ತಿಕ ಮಾಸದಲ್ಲಿ ರಥೋತ್ಸವ ನಡೆಯವುದು ಇಲ್ಲಿನ ವಿಶೇಷವಾಗಿದ್ದು, ರಥೋತ್ಸವಕ್ಕೂ ಮುನ್ನ ಮಠದ ಆವರಣದಲ್ಲಿ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿತ್ತು.
ಕೊಟ್ಟೂರು ಸಿಪಿಐ ದುರುಗಪ್ಪ, ಪಿಸ್ಐ ಸಿದ್ರಾಮಪ್ಪ ಬಿದಾರಾಣಿ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿತ್ತು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
ಅಜಯ್ 8123302594, ದಯಾನಂದ್ ಸಜ್ಜನ್ 9886972975

