ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯ ಬಾಲಕಿಯರ ವಸತಿ ನಿಲಯಕ್ಕೆ ತಹಶೀಲ್ದಾರ್ ನೇತ್ರಾವತಿ ವಿ ಕೆ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಕುಂದುಕೊರತೆ ವಿಚಾರಿಸಿದರು. ಸಮಯ ವ್ಯರ್ಥ ಮಾಡದೆ ಉತ್ತಮವಾಗಿ ವ್ಯಾಸಂಗ ಮಾಡಬೇಕೆಂದು ಕಿವಿಮಾತು ಹೇಳಿದರು.
ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತವಾಗಿ ಇರಬೇಕಾದ ಸೌಕರ್ಯಗಳು, ಆಹಾರದ ಗುಣಮಟ್ಟ, ಶೌಚಾಲಯಗಳ ಶುಚಿತ್ವದ ಬಗ್ಗೆ ಅವರು ಪರಿಶೀಲಿಸಿದ ನಂತರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಬೇಕು. ಅವರ ಆರೋಗ್ಯದ ಕಡೆಗೆ ಗಮನಹರಿಸಬೇಕು. ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ವಸತಿ ನಿಲಯದಲ್ಲಿರುವ ಸಣ್ಣ ಪುಟ್ಟ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
ಅಜಯ್ 8123302594, ದಯಾನಂದ್ ಸಜ್ಜನ್ 9886972975

