ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ (94) ಅವರು ಇಂದು (ಭಾನುವಾರ) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ವಯೋ ಸಹಜ ಆರೋಗ್ಯ ಸಮಸ್ಯೆಗಳ ಕಾರಣದಿಂದ ಶಾಮನೂರು ಶಿವಶಂಕರಪ್ಪ ಅವರನ್ನು ಕಳೆದೊಂದು ತಿಂಗಳಿನಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಅನೇಕ ಹಿರಿಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದರು.
ರಾಜ್ಯ ರಾಜಕಾರಣ ಹಾಗೂ ವೀರಶೈವ ಸಮುದಾಯದ ಪ್ರಮುಖ ನಾಯಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಸಂತಾಪ ವ್ಯಕ್ತವಾಗಿದೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
ಅಜಯ್ 8123302594, ದಯಾನಂದ್ ಸಜ್ಜನ್ 9886972975

