ಕೂಡ್ಲಿಗಿ: ತಾಲೂಕಿನ ಕಾನಹೊಸಹಳ್ಳಿಯ ಕುಲುಮೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮೈತ್ರಿ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈಚೆಗೆ ಹೊಸಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸ್ಪರ್ಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಮುಖಂಡರಾದ ಕುಲುಮೆಹಟ್ಟಿ ವೆಂಕಟೇಶ್, ಸಿಆರ್ಪಿ ಮೌನೇಶ್ ಆಚಾರ್, ಎಸ್ ಡಿ ಎಂ ಸಿ ಅಧ್ಯಕ್ಷ ಉಮೇಶ್, , ಮುಖ್ಯ ಶಿಕ್ಷಕಿ ಬಿ ಹೇಮಾವತಿ, ಸಹ ಶಿಕ್ಷಕರಾದ ಮಂಗಳಗೌರಿ, ಮಾರೇಗೌಡ, ಬೇಬಿ ಎಸ್ ಸೇರಿದಂತೆ ಊರಿನ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
ಅಜಯ್ 8123302594, ದಯಾನಂದ್ ಸಜ್ಜನ್ 9886972975

