ಕೂಡ್ಲಿಗಿ: ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಕ್ಷೇತ್ರಶಿಕ್ಷಣಾಧಿಕಾರಿ ಮಹತ್ವದ ಹೆಜ್ಜೆ ಇಟ್ಟಿದ್ದು, ಮೊಬೈಲ್ ಮತ್ತು ಟಿವಿ ಸ್ವಿಚ್ ಆಪ್ ಮಾಡುವಂತೆ ಡಂಗೂರ ಸಾರಲು ಮುಂದಾಗಿದ್ದಾರೆ.
ಕೂಡ್ಲಿಗಿ BEO ಮೈಲೇಶ್ ಬೇವೂರ ಜೆ, ಅವರು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗೆ ಪತ್ರ ಬರೆದಿದ್ದಾರೆ.
ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಡಂಗೂರ ಸಾರುವಂತೆ ನಿರ್ದೇಶನ ನೀಡುವಂತೆ ಕೋರಿಕೆ ಮಾಡಿದ್ದಾರೆ.
ಸಾಯಂಕಾಲ 7 ರಿಂದ 9 ಗಂಟೆಯವರೆಗೆ ಮೊಬೈಲ್ ಹಾಗೂ ಪೋನ್ ಸ್ವಿಚ್ ಆಪ್ ಮಾಡುವಂತೆ ಡಂಗೂರ ಸಾರಬೇಕು, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.
2025-26ನೇ ಸಾಲಿನ SSLC ಫಲಿತಾಂಶ ಸುಧಾರಣೆಗಾಗಿ ಮಕ್ಕಳು ಓದುವ ಹಿತದೃಷ್ಟಿಯಿಂದ ಈ ಕ್ರಮಕ್ಕೆ ಮುಂದಾಗಿದ್ದಾರೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
ಅಜಯ್ ಬಿ ಟಿ ಗುದ್ದಿ 8123302594, ದಯಾನಂದ್ ಸಜ್ಜನ್ 9886972975

