ಕೂಡ್ಲಿಗಿ: ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಾಪುರ ಗ್ರಾಮದ ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿತ್ತು, ಪ್ರಕರಣದ ಜಾಡು ಹಿಡಿದ ಕಾನಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ.
ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು.
ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.
ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
ಅಜಯ್ ಬಿ ಟಿ ಗುದ್ದಿ 8123302594, ದಯಾನಂದ್ ಸಜ್ಜನ್ 9886972975

