ವಿಜಯನಗರ; ಸ್ಟ್ರೋಕ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರೇಹಡಗಲಿ ಪೊಲೀಸ್ ಠಾಣೆಯ ಕ್ರೈಂ ಪಿಎಸ್ಐ ಮೃತಪಟ್ಟಿದ್ದಾರೆ.
ತಿಮ್ಮಪ್ಪ ಜೋಗಿನ(59) ಮೃತ ಪಿಎಸ್ಐ , ಮೂಲತಃ ಹರಪನಹಳ್ಳಿ ಪಟ್ಟಣದವರಾಗಿರೋ ತಿಮ್ಮಪ್ಪ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡ್ತಿದ್ದರು. 32 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಕೆ ಮಾಡಿದ್ದ ತಿಮ್ಮಪ್ಪ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ವಿಜಯನಗರ ಜಿಲ್ಲೆಯ ಎಸ್ಪಿ ಜಾಹ್ನವಿ, ಎಎಸ್ಪಿ ಮಂಜುನಾಥ್ ಸೇರಿದಂತೆ ಪೊಲೀಸ್ ಇಲಾಖೆಯಿಂದ ಸಂತಾಪ ಸೂಚಿಸಲಾಗಿದೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
ಅಜಯ್ 8123302594, ದಯಾನಂದ್ ಸಜ್ಜನ್ 9886972975

