ವಿಜಯನಗರ; ಶಿವಮೊಗ್ಗ, ಚಿಕ್ಕಮಗಳೂರು ಸಹಿತ ಅಚ್ಚುಕಟ್ಟು ಪ್ರದೇಶದಲ್ಲಿ ಹೆಚ್ಚು ಮಳೆಯಾದರಿಂದ ತುಂಗಭದ್ರಾ ನದಿಯಲ್ಲಿ ನೀರಿನ ಒಳಹರಿವು ಹೆಚ್ಚಳವಾಗಿದೆ. ಈ ಹಿನ್ನಲ್ಲೆಯಲ್ಲಿ ನದಿ ಪಾತ್ರದ ಜನರಿಗೆ ತುಂಗಭದ್ರಾ ಬೋರ್ಡ್ ಎಚ್ಚರಿಕೆ ಸಂದೇಶ ನೀಡಿದೆ.
ತುಂಗಭದ್ರಾ ಗೇಟ್ನಿಂದ ನೀರು ಬಿಡುಗಡೆಯ ಎಚ್ಚರಿಕೆ ನೀಡಿದ್ದು, ನಾಳೆ ಬೆಳಿಗ್ಗೆ ಆಣೆಕಟ್ಟೆಯ ಗೇಟ್ ತೆರೆದು ನೀರನ್ನು ಹರಿಸಲಾಗುವುದು ಎಂದು ಮಂಡಳಿ ಎಚ್ಚರಿಕೆ ನೀಡಿದೆ.
ತುಂಗಾ ಜಲಾಶಯದಿಂದ 12 ಸಾವಿರ ಕ್ಯೂಸೆಕ್, ಭದ್ರಾ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ಹಾಗೂ ವರದಾ ನದಿಯಿಂದ 2 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿದು ಬರುತಿದೆ. ನಾಳೆ ಬೆಳಿಗ್ಗೆ ಒಳಹರಿವಿನ ಪ್ರಮಾಣ 25 ಸಾವಿರ ಕ್ಯೂಸೆಕ್ಗೆ ಹೆಚ್ಚುವ ನಿರೀಕ್ಷೆ ಇದೆ.
ಹೀಗಾಗಿ ಕೆಲವು ಗೇಟ್ಗಳನ್ನು ತೆರೆದು 5 ಸಾವಿರ ಕ್ಯೂಸೆಕ್ನಿಂದ 20 ಸಾವಿರ ಕ್ಯೂಸೆಕ್ನಷ್ಟು ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಮಂಡಳಿ ಎಚ್ಚರಿಕೆ ಸಂದೇಶ ನೀಡಿದೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
ಅಜಯ್ 8123302594, ದಯಾನಂದ್ ಸಜ್ಜನ್ 9886972975

