ವಿಜಯನಗರ; ಹುಬ್ಬಳ್ಳಿ ಮೂಲದ ಸಿವಿಲ್ ಗುತ್ತಿಗೆದಾರ ಹೂವಿನಹಡಗಲಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಿವಿಲ್ ಗುತ್ತಿಗೆದಾರ ಆನಂದ ಉಮೇಶ್ ಹೆಗಡೆ (40) ಆತ್ಮಹತ್ಯೆ ಮಾಡಿಕೊಂಡಾತ, ಹುಬ್ಬಳ್ಳಿಯ ಭವಾನಿ ನಿವಾಸಿಯಾಗಿದ್ದ ಸಿವಿಲ್ ಗುತ್ತಿಗೆದಾರ ಆನಂದ ಉಮೇಶ್ ಹೆಗಡೆ, ಹೂವಿನಹಡಗಲಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿ ಟೆಂಡರ್ ಪಡೆದು ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು.
ಭಾನುವಾರ ಸಂಜೆ ಹುಬ್ಬಳ್ಳಿಯಿಂದ ಹೂವಿನಹಡಗಲಿಗೆ ಬಂದು ಉಳಿದುಕೊಂಡಿದ್ದರು, ಬೆಳಗ್ಗೆಯಾದ್ರೂ ಕುಟುಂಬಸ್ಥರ ಕರೆ ಸ್ವೀಕರಿಸದೇ ಇದ್ದಾಗ ಲಾಡ್ಜ್ ನಂಬರ್ ಗೆ ಕರೆ ಮಾಡಿದ್ದಾರೆ, ಬಾಗಿಲು ತೆಗೆಯದೇ ಇದ್ದಾಗ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದ್ದಾರೆ.
ಪೊಲೀಸರು ಬಾಗಿಲು ಓಪನ್ ಮಾಡಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

