ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ
ಅವರು ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಹಾಂತೇಶ್ ಬೀಳಗಿ ಅವರು ವಿಜಯಪುರದಿಂದ ಕಲಬುರಗಿಗೆ ತಮ್ಮ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು. ಬೀಳಗಿ ಅವರೊಂದಿಗೆ ಕಾರಿನಲ್ಲಿದ್ದ ಒಟ್ಟು ಮೂವರು ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.
ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೆಡರ್ನ ಐಎಎಸ್ ಅಧಿಕಾರಿಯಾಗಿದ್ದರು. ಕೆಎಸ್ಎಂಸಿಎಲ್ ಎಂಡಿ ಆಗುವ ಮೊದಲು ಅವರು ಬೆಸ್ಕಾಂ ಎಂಡಿ ಆಗಿಯೂ ಕಾರ್ಯನಿರ್ವಹಿಸಿದ್ದರು.
Trending
- ತಮ್ಮಯ್ಯನವರ ತಿಪ್ಪಮ್ಮ ನಿಧನ
- ಬಾಬಾ ಸಾಹೇಬರ ತತ್ವಗಳು ಸಮಾಜಕ್ಕೆ ದಾರಿ ದೀಪ
- ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ
- ಇಬ್ಬರು ವಂಚಕರ ಬಂಧನ; ₹29.50 ಲಕ್ಷ ವಶ
- ಸಿಡಿಲು ಬಡಿದು ಹೊತ್ತಿ ಉರಿದ ವಿಂಡ್ ಫ್ಯಾನ್
- ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ
- ಕೇಂದ್ರದ ವಿರುದ್ಧ ಶಾಸಕ ಶ್ರೀನಿವಾಸ್ ಪ್ರತಿಭಟನೆ
- ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

