ಕೂಡ್ಲಿಗಿ ; ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿಯಾಗಿದೆ ಎಂದು ಮುಖಂಡ ರೇವಣ್ಣ ಹೇಳಿದರು.
ತಾಲೂಕಿನ ಕಾನಹೊಸಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದಿ ಸಂಸ್ಥೆಯಿಂದ ಸಂಕ್ರಾಂತಿ ಹಬ್ಬದ ಅಂಗವಾಗಿ ಮಂಗಳವಾರ ಶ್ರೀ ಬಸವೇಶ್ವರ ದೇವಸ್ಥಾನ ಸೇರಿ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಮ್ಮ ಪ್ರದೇಶದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒಂದು ಉತ್ತಮ ಉದಾಹರಣೆಯಾಗಿದೆ. ಈ ಯೋಜನೆಯ ಮೂಲಕ ಮಹಿಳೆಯರು ಸ್ವಸಹಾಯ ಸಂಘಗಳನ್ನು ರಚಿಸಿಕೊಂಡು ತಮ್ಮದೇ ಆದ ಉದ್ಯೋಗಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ನಾಗರಾಜ, ಸೇವಾ ಪ್ರತಿನಿಧಿ ರೇಣುಕಮ್ಮ, ಒಕ್ಕೂಟದ ಕಾರ್ಯದರ್ಶಿ ಗಾಯತ್ರಿ, ಗ್ರಾಮ ಪಂಚಾಯ್ತಿ ಸದಸ್ಯೆ ಗೌರಮ್ಮ, ಮುಖಂಡರಾದ ಬಸವರಾಜ ಇತರರಿದ್ದರು.

