ಕೂಡ್ಲಿಗಿ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಸೋಮವಾರ ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಯಿತು. ಗ್ರಾಮದ ಊರ ಬಾಗಿಲು ಬಳಿ ಇರುವ ಬಸವೇಶ್ವರ ಪುತ್ಥಳಿ ಗೆ ಬಸವ ಸಮಿತಿ ಯ ಸದಸ್ಯರು ಹಾಗೂ ಗ್ರಾಮಸ್ಥರು ಸೋಮವಾರ ಗಂಗಾ ಪೂಜೆ ನೆರವೇರಿಸಿ ನಂತರ ವಿಶೇಷ ಪೂಜೆ ಮಾಡಲಾಯಿತು, ಇದೇ ಸಂದರ್ಭದಲ್ಲಿ ಪಿ ಯು ಸಿ ನಲ್ಲಿ ಹೆಚ್ಚು ಅಂಕ ಗಳಿಸಿದ ಪಿ,ಕೆ, ಸ್ಪಂದನ, ಪಲ್ಲವಿ,ಸಂಜನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೂ ಇತರೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಯಿತು, ಲಂಡನ್ ನ ಥೇಮ್ಸ ನದಿ ತೀರದಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆ ಮಾಡಿದ ದಿನವೇ ಅದೇ ಮಾದರಿಯ ಪುತ್ಥಳಿ ಯನ್ನು ಹುಲಿಕೆರೆ ಗ್ರಾಮದಲ್ಲಿ ಪ್ರತಿಷ್ಟಾಪನೆ ಮಾಡಿರುವುದು ವಿಶೇಷ, ಕಾರ್ಯಕ್ರಮದಲ್ಲಿ ಗ್ರಾಮದ ಮಕ್ಕಳು, ಮಹಿಳೆಯರು, ಸೇರಿದಂತೆ ನೂರಾರು ಜನ ಭಾಗಿಯಾಗುದ್ದರು,ಗ್ರಾಮದ ಜನರಿಗೆ ಪಾನಕ,ಹಾಗೂ ಪ್ರಸಾದದ ವ್ಯವಸ್ಥೆ ಮಾಡಿಲಾಗಿತ್ತು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
ಅಜಯ್ ಬಿ ಟಿ ಗುದ್ದಿ 8123302594, ದಯಾನಂದ್ ಸಜ್ಜನ್ 9886972975

