ಹಗರಿಬೊಮ್ಮನಹಳ್ಳಿ; ತಾಲ್ಲೂಕಿನ ಬಲ್ಲಾಹುಣ್ಣಿ ಗ್ರಾಮದಲ್ಲಿ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶೀಲಾ(28) ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಿಷ ಸೇವಿಸಿದ್ದ ಅವರನ್ನು ಹುಬ್ಬಳ್ಳಿಯ ಎಸ್ಡಿಎಂ ಆಸ್ಪತ್ರೆಗೆ ಶೀಲಾ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರಿಗೆ ಪುತ್ರ, ಪುತ್ರಿ ಇದ್ದಾರೆ. ಪತಿ ಬ್ಯಾಂಕ್ ಒಂದರಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೌಕರಿ ಮಾಡುತ್ತಿದ್ದರು. ಈ ಕುರಿತಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.

