Author: Team Sanchalana

ವಿಜಯನಗರ; ಸ್ಟ್ರೋಕ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರೇಹಡಗಲಿ ಪೊಲೀಸ್ ಠಾಣೆಯ ಕ್ರೈಂ ಪಿಎಸ್ಐ ಮೃತಪಟ್ಟಿದ್ದಾರೆ. ತಿಮ್ಮಪ್ಪ ಜೋಗಿನ(59) ಮೃತ ಪಿಎಸ್ಐ , ಮೂಲತಃ ಹರಪನಹಳ್ಳಿ ಪಟ್ಟಣದವರಾಗಿರೋ ತಿಮ್ಮಪ್ಪ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡ್ತಿದ್ದರು. 32 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಕೆ ಮಾಡಿದ್ದ ತಿಮ್ಮಪ್ಪ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ವಿಜಯನಗರ ಜಿಲ್ಲೆಯ ಎಸ್ಪಿ ಜಾಹ್ನವಿ, ಎಎಸ್ಪಿ ಮಂಜುನಾಥ್ ಸೇರಿದಂತೆ ಪೊಲೀಸ್ ಇಲಾಖೆಯಿಂದ ಸಂತಾಪ ಸೂಚಿಸಲಾಗಿದೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975

Read More

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಸೇರಿದಂತೆ ಈ ಪ್ರದೇಶದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶ: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕೆಲವು ತಾಲೂಕುಗಳಲ್ಲಿ (ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳದಲ್ಲಿ) ಭಾರೀ ಮಳೆಯಾಗುವ ಸಂಭವವಿದೆ. ಹವಾಮಾನ ವೈಪರೀತ್ಯದ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಉತ್ತರ ಒಳನಾಡು: ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ. ಒಟ್ಟಾರೆಯಾಗಿ, ರಾಜ್ಯದಲ್ಲಿ ನಾಳೆ…

Read More

ಕೂಡ್ಲಿಗಿ; ತಾಲೂಕಿನ ಗುಡೇಕೊಟೆ ಬಳಿಯ ಕಸಾಪುರದ ಬಳಿ ನಿರ್ಮಾಣವಾಗಿರು ರಾಜ್ಯದ ಮೊದಲ ಹುಣಸೆ ಹಾಗೂ ಶೇಂಗಾ ಸಂಸ್ಕರಣ ಘಟಕವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಲೋಕಾರ್ಪಣೆ ಮಾಡಿದರು. ಕೂಡ್ಲಿಗಿಯೂ ಅತಿ ಹೆಚ್ಚು ಹುಣಸೆ ಬೆಳೆಯೋ ನಾಡಾಗಿದ್ದು, ತಾಲೂಕು ಸೇರಿದಂತೆ ಸುತ್ತಮುತ್ತಲಿನ ರೈತರಿಗೆ ಘಟಕದಿಂದ ಅನುಕೂಲವಾಗಲಿದೆ. ರಾಜ್ಯ ಸೇರಿದಂತೆ ಆಂದ್ರಪ್ರದೇಶ, ತೆಲಂಗಾಣ ರೈತರಿಗೂ ಸಹ ಹುಣಸೆ, ಶೇಂಗಾ ಘಟಕ ಅನುಕೂಲವಾಗಲಿದೆ. ಬಳ್ಳಾರಿ ಸಂಸದ ತುಕಾರಾಂ, ಕೂಡ್ಲಿಗಿ ಶಾಸಕ ಡಾ. ಎನ್ ಟಿ ಶ್ರೀನಿವಾಸ್, ಹರಪನಹಳ್ಳಿ ಶಾಸಕಿ ಎಂಪಿ ಲತಾ ಮಲ್ಲಿಕಾರ್ಜುನ, ಡಿಸಿ ಕವಿತಾ ಮನ್ನಿಕೇರಿ ಸೇರಿದಂತೆ ಇತರರು ಸಾಥ್ ನೀಡಿದರು. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975

Read More

ಹೊಸಪೇಟೆಯಲ್ಲಿ ಹೊಟೇಲ್ ಉದ್ಯಮಿಯ ಮೇಲೆ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ(ED) ದಾಳಿ ನಡೆಸಿದೆ. ಶ್ರೀನಿವಾಸ್ ರಾವ್( ಸೀನಾಬಾಬು ) ರವರ ಪ್ರಿಯದರ್ಶನೀ ಹೋಟೆಲ್, ವಿನಾಯಕ ನಗರದ ಮನೆ ಮತ್ತು ಬಸವೇಶ್ವರ ಬಡಾವಣೆಯ ಮನೆಯ ಮೇಲೆ ಇಡಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸೀನಬಾಬು, ಗಣಿ ಗುತ್ತಿಗೆ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು ಹಾಗೂ ಪ್ರೀಯದರ್ಶನಿ ಹೋಟೆಲ್ ನ ಲೆಕ್ಕಪತ್ರ ವ್ಯವಹಾರದಲ್ಲಿ ವ್ಯತ್ಯಾಯ ಇರೋ ಕಾರಣದಿಂದಾಗಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗ್ಗೆಯೇ ಬಂದು ದಾಳಿ ಮಾಡಿರೋ ED ಅಧಿಕಾರಿಗಳು, ಹೊಸಪೇಟೆಯ ರೈಲ್ವೇ ನಿಲ್ದಾಣ ರಸ್ತೆಯಲ್ಲಿರೋ ಪ್ರಿಯದರ್ಶಿನಿ ಹೊಟೇಲ್ ನಲ್ಲಿ ಲೆಕ್ಕಪತ್ರ ಪರಿಶೀಲನೆ ನಡೆಸುತ್ತಿದ್ದಾರೆ. ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975

Read More

ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಆಲೂರು ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ಬುಧವಾರ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಬೊಗಳರಹಟ್ಟಿಯಿಂದ ಕಾನಹೊಸಹಳ್ಳಿ ಬಳಿಯ ಗ್ರಾಮವೊಂದಕ್ಕೆ ನಾಮಕರಣ‍ ಸಮಾರಂಭಕ್ಕೆಂದು ಜನರನ್ನು ತುಂಬಿಕೊಂಡು ಬರುವಾಗ ಪಲ್ಟಿಯಾಗಿದೆ. 15ಕ್ಕೂ ಹೆಚ್ಚು ಜನರು ಟ್ರ್ಯಾಕ್ಟರ್ ನಲ್ಲಿದ್ದು, ಅದೃಷ್ಟವಾಷತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ, ಕಾನಹೊಸಹಳ್ಳಿ ಪಿಎಸ್ಐ ಸಿದ್ದರಾಮಪ್ಪ ಬಿದರಾಣಿ, ಸಿಸಿಟಿವಿ ಸೇರಿದಂತೆ ಇತರೆ ಮಾಹಿತಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಹೆದ್ದಾರಿ ಸಹಾಯಕರ ತಂಡ, ಹೆದ್ದಾರಿ ಸಿಬ್ಬಂದಿ, ಪೊಲೀಸರು, ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಿಲಾಗಿದೆ ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ ಅಜಯ್ 8123302594, ದಯಾನಂದ್ ಸಜ್ಜನ್ 9886972975

Read More

ಕೂಡ್ಲಿಗಿ: ಸಾರ್ವಜನಿಕರ ಸಮಸ್ಯೆಗಳಿಗೆ ಬೆನ್ನು ತೋರಿಸದೇ, ಊರುಗೋಲಾಗಿ ಇರುವುದು ನನ್ನ ಧ್ಯೇಯವಾಗಿದೆ. ಸಮಸ್ಯೆಯನ್ನು ಕೇಳುವುದಕ್ಕೇ ಮೀಸಲಾಗದೇ, ಅವರ ಸಮಸ್ಯೆಗಳಿಗೆ ಪರಿಹಾರ ನೀಡುವ ಉದ್ದೇಶವೇ ಪ್ರತಿ ಗ್ರಾಪಂ ವಾರು ನಡೆಯುವ ಈ ಕಾರ್ಯಕ್ರಮವಾಗಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು. ಕೂಡ್ಲಿಗಿ ತಾಲೂಕಿನ ಚಿರತಗುಂಡು ಗ್ರಾಮದಲ್ಲಿ ಬುಧವಾರ ನಡೆದ ಮನೆ ಮನೆಗೆ ಶಾಸಕರು, ಮನೆ ಬಾಗಿಲಿಗೆ ಸರಕಾರ ಎನ್ನುವಂಥ ಕನಸಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದಲ್ಲಿ 216 ಹಳ್ಳಿಗಳಿದ್ದು, ಎಲ್ಲಾ ಹಳ್ಳಿಗಳಿಗೆ ಒಂದೇ ಸಲಕ್ಕೆ ಅಭಿವೃದ್ಧಿ ಆಗಲ್ಲ. ಹೀಗಾಗಿ, ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಪಂ ಕೇಂದ್ರದಲ್ಲಿ ಪ್ರತಿ ವಾರವು ಕಾರ್ಯಕ್ರಮ ಆಯೋಜನೆ ಮಾಡಿ ಹಳ್ಳಿಗಳ ಸಮಸ್ಯೆ ಸ್ಪಂದಿಸಿ ಅವುಗಳ ಪರಿಹಾರಕ್ಕೆ ಯತ್ನಿಸಲಾಗುವುದು. ಚಿರತಗುಂಡು ಗ್ರಾಪಂ ವ್ಯಾಪ್ತಿಯ ಮೂರು ಹಳ್ಳಗಳ ಅಭಿವೃದ್ದಿಗೆ 3.66 ಕೋಟಿ ರೂ ಅನುದಾನದ ನೀಡಲಾಗಿದೆ. ತಾಲೂಕಿನ 136 ಹಳ್ಳಿಗಳಿಗೆ ಅನುದಾನ ಒದಗಿಸಿದ್ದು, ಟೆಂಡರ್ ಹಂತದಲ್ಲಿದೆ ಶೀಘ್ರವೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ಹಳ್ಳಿಗಳಲ್ಲಿ ಸಹೋದರರ ನಡುವೆ ಭೂಮಿ ವ್ಯಾಜ್ಯಗಳಿದ್ದು, ತಹಸೀಲ್ದಾರ್‌ರು ಪೋತಿ, ಪೋಡಿ…

Read More

ಕೂಡ್ಲಿಗಿ; ತಾಲೂಕಿನ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಭೀಮಣ್ಣ ಗಜಾಪುರ ರಚನೆಯ “24*7 ಅರಣ್ಯ ರಕ್ಷಕ ಭಟ್ರಹಳ್ಳಿ ಗೂಳೆಪ್ಪರ” ಜೀವನ ಚರಿತ್ರೆಯ ಪುಸ್ತಕವನ್ನು ಕೂಡ್ಲಿಗಿಯಲ್ಲಿ ನಾಳೆ ಲೋಕಾರ್ಪಣೆಗೊಳ್ಳಲಿದೆ ಎಂದು ಪುಸ್ತಕ ಲೇಖಕ ಭೀಮಣ್ಣ ಗಜಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎರಡು ದಶಕದಿಂದ ಸುಮಾರು 150 ಹೆಕ್ಟ್ ರ್ ಅರಣ್ಯ ಪ್ರದೇಶವನ್ನು ಯಾವುದೇ ಫಾಲಾಪೇಕ್ಷೆ ಇಲ್ಲದೆ ಅನಕ್ಷರಸ್ಥ ಭಟ್ರಹಳ್ಳಿ ಗೂಳೆಪ್ಪ ಅವರ ಜೀವನ ಚರಿತ್ರೆ ಕುರಿತಾದ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ವನ್ನು ನಾಳೆ ಬೆಳಿಗ್ಗೆ 10-30 ಗಂಟೆಗೆ ಪಟ್ಟಣದ ಸಂಡೂರು ರಸ್ತೆಯ ಜ್ಞಾನ ಭಾರತಿ ಬಿಇಡಿ ಕಾಲೇಜ್ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೂಡ್ಲಿಗಿ ಹಿರೇಮಠದ ಪ್ರಶಾಂತಸಾಗರ ಶಿವಾಚಾರ್ಯರು ಹಾಗೂ ಕಾನಾಮಡುಗು ದಾಸೋಹ ಮಠದ ಐಮಡಿ ಶರಣಾರ್ಯರು ಸಾನಿಧ್ಯ ವಹಿಸಲಿದ್ದಾರೆ. ಕೂಡ್ಲಿಗಿ ಶಾಸಕ ಡಾ.ಶ್ರೀನಿವಾಸ್ ಎನ್ ಟಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಎಡೆಯೂರು ಸಿದ್ದಲಿಂಗೇಶ್ವರ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಕೆ.ಎಂ.ರವಿಕುಮಾ‌ರ ವಹಿಸಲಿದ್ದಾರೆ. ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ಶ್ರೀ ರಾಮುಲು…

Read More

ಹೊಸಪೇಟೆಯ ಎಲ್ಎಫ್ಎಸ್ ಶಾಲೆಯ ಹಾಸ್ಟೆಲ್ ನಲ್ಲಿ ಗ್ಯಾಸ್ ಲೀಕ್ ಆಗಿದ್ದು, ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಗ್ಯಾಸ್ ಲೀಕ್ ಆಗುತ್ತಿದ್ದಂತೆಯೇ ಶಾಲಾ ಮಕ್ಕಳನ್ನು ಪೊಷಕರು, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹೊರ ಹಾಕಿದ್ದಾರೆ. 50- 60 ಶಾಲಾ ಮಕ್ಕಳಿರೋ ಹಾಸ್ಟೆಲ್ ನಲ್ಲಿ ಗ್ಯಾಸ್ ಲೀಕ್ ಆಗಿದೆ. ಹೊಸಪೇಟೆ ಪಟ್ಟಣ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಷಕರಾದ ಡ್ಯಾನಿಯಲ್ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ನಥಾಲಿಯನ್ ಐ ಸಾಂಗ್ಲಿ ಎಂಬುವರು ಲೀಕೇಜ್ ತಡೆದಿದ್ದಾರೆ. HP ಗ್ಯಾಸ್ ಕಂಪನಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇಂದಿನಿಂದ ದಕ್ಷಿಣ ಮತ್ತು ಉತ್ತರ ಒಳನಾಡಿನ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಜಾರಿಯಲ್ಲಿದೆ. ಮಳೆರಾಯ ಅಬ್ಬರಿಸುವ ನಿರೀಕ್ಷೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡಾವೃತ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ ಸುಮಾರು 30°C ಮತ್ತು ಕನಿಷ್ಠ 20°C ಇರಬಹುದು. ಅಕ್ಟೋಬರ್‌ 14: ಕರಾವಳಿ ಜಿಲ್ಲೆಗಳು: ಹಗುರದಿಂದ ಸಾಧಾರಣ ಮಳೆಯ ಸಾಧ್ಯತೆ. ಉತ್ತರ ಒಳನಾಡು: ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯ ಸಾಧ್ಯತೆ. ದಕ್ಷಿಣ ಒಳನಾಡು: ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ. ಇತರ ಜಿಲ್ಲೆಗಳು: ಬಳ್ಳಾರಿ,…

Read More

ಖ್ಯಾತ ಹಿರಿಯ ರಂಗಭೂಮಿ ಕಲಾವಿದ, ಹಾಸ್ಯನಟ ಮತ್ತು ಧಾರವಾಡ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟಿ ಅವರು ಹೃದಯಾಘಾತದಿಂದ ಸೋಮವಾರ ನಿಧನರಾದರು. ಭಾನುವಾರ ಹೃದಯಾಘಾತ ಸಂಭವಿಸಿದ ಕಾರಣ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್‌ಗಾಗಿ ಉಡುಪಿಗೆ ಬಂದಿದ್ದ ರಾಜು ತಾಳಿಕೋಟಿ ಅವರು, ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುವಾಗ ಭಾನುವಾರ ರಾತ್ರಿ ಅವರಿಗೆ ಹೃದಯಾಘಾತವಾಗಿದೆ. ಈ ಮೊದಲು ಕೂಡ ಅವರಿಗೆ ಹೃದಯಾಘಾತವಾಗಿ ಸ್ಟಂಟ್ ಅಳವಡಿಸಲಾಗಿತ್ತು. ಒತ್ತಡದಿಂದಾಗಿ ಮತ್ತೆ ಹಾರ್ಟ್ ಅಟ್ಯಾಕ್ ಆಗಿರಬಹುದು ಎಂದು ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದಾರೆ. ಅವರ ಅಂತ್ಯಸಂಸ್ಕಾರವನ್ನು ವಿಜಯಪುರದಲ್ಲಿ ನೆರವೇರಿಸಲಾಗುವುದು ಎಂದು ಪುತ್ರ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ. ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ಅವರು ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ನಟನಾಗಿರುವುದರ ಜೊತೆಗೆ ಅವರು…

Read More